ಇಂಫಾಲ: 'ಇಂಡಿಯಾ' ಮೈತ್ರಿಕೂಟದ ಭಾಗವಾಗಿರುವ ಮಣಿಪುರದ ವಿವಿಧ ಪಕ್ಷಗಳು ಕೇಂದ್ರ ಸರ್ಕಾರ ಹಾಗೂ ಮಣಿಪುರ ರಾಜ್ಯ ಸರ್ಕಾರದ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಇಂದು ಸೋಮವಾರ ಪ್ರತಿಭಟನೆ ನಡೆಸಲಿವೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ.
ಪ್ರತಿಭಟನೆಗೆ ಅನುಮತಿ ಸಿಗಲಿ, ಸಿಗದೆ ಇರಲಿ, 'ಇಂಡಿಯಾ' ಮೈತ್ರಿಕೂಟದ ನಾಯಕರು ಪ್ರತಿಭಟನೆ ನಡೆಸುವುದು ಖಂಡಿತ ಎಂದು ಮಣಿಪುರ ರಾಜ್ಯದ ಕಾಂಗ್ರೆಸ್ ಮುಖ್ಯ ವಕ್ತಾರ ಹರೇಶ್ವರ ಗೋಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.
ಮಣಿಪುರದ ಕಾಂಗ್ರೆಸ್ ಅಧ್ಯಕ್ಷ ಕೈಶಾಂ ಮೇಘಚಂದ್ರ ಅವರು ಪ್ರತಿಭಟನೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ನವೆಂಬರ್ 25ರಿಂದಲೇ ದೆಹಲಿಯಲ್ಲಿ ನಡೆಸುತ್ತಿದ್ದಾರೆ ಎಂದು ಗೋಸ್ವಾಮಿ ಹೇಳಿದರು. ಸಿಪಿಎಂ, ಟಿಎಂಸಿ, ಎಎಪಿ ನಾಯಕರು ಪ್ರತಭಟನೆಯಲ್ಲಿ ಭಾಗಿಯಾಗಲಿದ್ದಾರೆ.