ಕಾಸರಗೋಡು: ವಿದ್ಯಾನಗರ ಸರ್ಕಾರಿ ಕಾಲೇಜಿನಲ್ಲಿ ಭೌತಶಾಸ್ತ್ರ ವಿಷಯದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುವುದು. ಶೇ.55ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಮತ್ತು ನೆಟ್ ಅರ್ಹತೆಯಿರುವವರಾಗಿರಬೇಕು. ನೆಟ್ ಅರ್ಹರಾದವರ ಅಭ್ಯರ್ಥಿಗಳ ಅಭಾವವಿರುವಲ್ಲಿ ಶೇ.55 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದವರನ್ನು ಪರಿಗಣಿಸಲಾಗುವುದು. ಆಸಕ್ತ ಉದ್ಯೋಗಾರ್ಥಿಗಳು ಡಿ. 9ರಂದು ಮಧ್ಯಾಹ್ನ 1.30ಕ್ಕೆ ಕಾಲೇಜಿನಲ್ಲಿ ಜರಗುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಕಾಲೇಜು ಶಿಕ್ಷಣ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿರುವ ಅರ್ಹ ಉದ್ಯೋಗಾರ್ಥಿಗಳು ಮೂಲ ಪ್ರಮಾಣ ಪತ್ರಗಳೊಂದಿಗೆ ಪ್ರಾಂಶುಪಾಲರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ (04994 256027)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.