ಮುಂಬೈ: ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಯೊಂದರಲ್ಲಿ ಗುರುವಾರ ಮಧ್ಯಾಹ್ನ ಸಲ್ಫರ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.
ಸಿಂದಖೇಡ ರಾಜಾ ನಿವಾಸಿ ಅಶೋಕ ತೇಜರಾವ್ ದೇಶಮುಖ್ (56), ಪರ್ತೂರಿನ ಅಪ್ಪಾಸಾಹೇಬ ಶಂಕರ ಪಾರಖೆ (42) ಮೃತರು.
ಜಲ್ನಾ ಜಿಲ್ಲೆಯ ಬಾಗೂರಿನ ಬಾಗೇಶ್ವರಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗಾಯಗೊಂಡ ವ್ಯಕ್ತಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪರ್ತೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.