ನವದೆಹಲಿ: ಅಮೆರಿಕದ 39ನೇ ಅಧ್ಯಕ್ಷರಾಗಿದ್ದ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
'ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ನಿಧನದಿಂದ ಭಾರಿ ದುಃಖವಾಗಿದೆ. ದೂರದೃಷ್ಟಿ ಹೊಂದಿದ್ದ ಮುತ್ಸದ್ದಿ, ಜಾಗತಿಕ ಶಾಂತಿ ಮತ್ತು ಸೌಹಾರ್ದತೆಗಾಗಿ ದಣಿವರಿಯದೆ ಶ್ರಮ ಪಟ್ಟಿದ್ದಾರೆ.
ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್. ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ ಕಾರ್ಟರ್‌ಪುರಿ ಎಂದು ಹೆಸರಿಡಲಾಗಿತ್ತು.
ಕಾರ್ಟರ್ ಅವರ ನಿಧನಕ್ಕೆ ಜೋ ಬೈಡನ್, ಡೊನಾಲ್ಡ್ ಟ್ರಂಪ್ ಸಂತಾಪ ವ್ಯಕ್ತಪಡಿಸಿದ್ದಾರೆ.