HEALTH TIPS

ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್‌ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು (ಶನಿವಾರ) ಅವರನ್ನು ಇಲ್ಲಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ..

96 ವರ್ಷದ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಆಸ್ಪತ್ರೆಗೆ ದಾಖಲಾದ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಎರಡು ದಿನಗಳ ಹಿಂದೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನರರೋಗ ತಜ್ಞ ಡಾ.ವಿನಿತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕಳೆದ ಜುಲೈನಲ್ಲಿ ಅಡ್ವಾಣಿ ಅವರು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ಆಗಸ್ಟ್‌ನಲ್ಲಿ ಇದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.

ಅಯೋಧ್ಯೆ ರಾಮಮಂದಿರ ಹೋರಾಟದ ಮೂಲಕ ಹಿಂದುತ್ವದ ಬದ್ಧ ಪ್ರತಿಪಾದಕ, 'ಲೋಹ ಪುರುಷ' ಎಂದೇ ಗುರುತಿಸಿಕೊಂಡಿದ್ದ ಅಡ್ವಾಣಿ 1927ರ ನವೆಂಬರ್ 8ರಂದು ಅವಿಭಜಿತ ಭಾರತದ ಕರಾಚಿಯಲ್ಲಿ (ಈಗಿನ ಪಾಕಿಸ್ತಾನ) ಜನಿಸಿದ್ದರು.

ಕರಾಚಿಯ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಮುಂದೆ ಸಿಂಧ್‌ ಪ್ರಾಂತ್ಯದ ಹೈದರಾಬಾದ್‌ನ ಡಿ.ಜಿ.ನ್ಯಾಷನಲ್‌ ಕಾಲೇಜಿನಲ್ಲಿ ಪದವಿ, ಬಳಿಕ ಬಾಂಬೆಯ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದರು. 1947ರಲ್ಲಿ ಆರ್‌ಎಸ್‌ಎಸ್ ಸೇರಿದ ಅವರು, ರಾಜಸ್ಥಾನದಲ್ಲಿ ಸಂಘದ ಉಸ್ತುವಾರಿ ವಹಿಸಿಕೊಂಡಿದ್ದರು.

ನಂತರ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದರು. ಉಪಪ್ರಧಾನಿಯಾಗಿಯೂ ಕೆಲಸ ಮಾಡಿದ್ದರು. ಅವರ ಸೇವೆಗಾಗಿ ಈ ಬಾರಿಯ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಭಾರತ ರತ್ನ' ನೀಡಿ ಗೌರವಿಸಲಾಗಿತ್ತು.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries