ಕಾಸರಗೋಡು: ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ನವೀಕರಣ ಬ್ರಹ್ಮಕಲಶೋತ್ಸವದ ಮಂಗಳೂರು ಪ್ರಾದೇಶಿಕ ಸಮಿತಿ ರಚನಾಸಭೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ ಸಭಾಂಗಣದಲ್ಲಿ ನಡೆಯಿತು. ವಿಧಾನಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.
ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಮಧೂರು ದೇವಸ್ಥಾನದ ತಂತ್ರಿವರ್ಯರಾದ ಡಾ. ಶಿವಪ್ರಸಾದ್ ತಂತ್ರಿ ದೇರೆಬೈಲು, ಶರವು ದೇವಸ್ಥಾನದ ಶ್ರೀ ರಾಘವೇಂದ್ರ ಶಾಸ್ತ್ರಿ ಅವರು ಅನುಗ್ರಹ ಭಾಷಣ ಮಾಡಿದರು.
ಸಮಾರಂಭದಲ್ಲಿ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಧೂರು ದೇವಸ್ಥಾನದ ಪವಿತ್ರಪಾಣಿ ರತನ್ ಕುಮಾರ್ ಕಾಮಡ, ಬ್ರಹ್ಮ ಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಮಂಜುನಾಥ ಕಾಮತ್ ಉಪಸ್ಥಿತಿರಿದ್ದರು. ಧಾರ್ಮಿಕ, ಸಆಮಾಜಿಕ ಮುಖಂಡರು, ದೇಗುಲದ ಭಕ್ತಾದಿಗಳು, ಮಧೂರು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಮಧುಸೂದನನ್ ಅಯರ್ ಸ್ವಾಗತಿಸಿದರು.