ಕಾಸರಗೋಡು: 2024-25ನೇ ಆರ್ಥಿಕ ವರ್ಷದಲ್ಲಿ ಜಿಲ್ಲೆಯಲ್ಲಿ ಅತ್ಯುತ್ತಮ ಪಶು ಕಲ್ಯಾಣ ಚಟುವಟಿಕೆಗಳನ್ನು ನಿರ್ವಹಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಪಶುಸಂಗೋಪನಾ ಇಲಾಖೆಯ ಪಶು ಕಲ್ಯಾಣ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ವರ್ಷದಲ್ಲಿ ಪ್ರಾಣಿ ಸಂರಕ್ಷಣೆ ಮತ್ತು ಪ್ರಾಣಿ ಕಲ್ಯಾಣ ಕ್ಷೇತ್ರದಲ್ಲಿ ಗಮನಾರ್ಹ ಚಟುವಟಿಕೆಗಳನ್ನು ನಡೆಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳು ನಡೆಸಿದ ಚಟುವಟಿಕೆಗಳ ವಿವರವಾದ ವರದಿ, ಛಾಯಾಚಿತ್ರಗಳ ಜತೆಗೆ ಬಿಳಿ ಕಾಗದದ ಮೇಲೆ ಸಿದ್ಧಪಡಿಸಿದ ಅರ್ಜಿಯನ್ನು ಡಿಸೆಂಬರ್ 27 ರಂದು ಸಂಜೆ 5ರ ಮುಂಚಿತವಾಗಿ ಮುಖ್ಯ ಪಶುವೈದ್ಯಾಧಿಕಾರಿ, ಜಿಲ್ಲಾ ಪಶುವೈದ್ಯಕೀಯ ಕೇಂದ್ರ, ಅಣಂಗೂರು, ಕಾಸರಗೋಡು-671121 ಎಂಬ ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ (04994 224624)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.