ಕಾಸರಗೋಡು: ವಿವಿಧ ವಲಯಗಳಲ್ಲಿ ಸಾಧನೆಗೈದ ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ವಲಿಯ ಪರಂಬ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಿಲಿಕೋಡು ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಸಾಮಾಜಿಕ ನೀತಿ ಇಲಾಖೆಗಳನ್ನು ಜಿಲ್ಲಾ ಯೋಜನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
2021ರಲ್ಲಿ ಅಕ್ಷಯ ಶಕ್ತಿ ಪ್ರಶಸ್ತಿ, 2022 ಮತ್ತು 2023ರಲ್ಲಿ ರಾಜ್ಯ ಜಾಗೃತ ಸಮಿತಿ ಪ್ರಶಸ್ತಿ ಜಿಲ್ಲೆಯ ಅಧಿಕೃತ ಜಾತಿಗಳನ್ನು ಘೋಷಿಸುವುದು ಮತ್ತು ಅವುಗಳ ಸಂರಕ್ಷಣೆ, ರಾಷ್ಟ್ರೀಯ ದಾಖಲೆ ಪ್ರಮಾಣೀಕರಣ ಪ್ರಶಸ್ತಿ ಸೇರಿದಂತೆ ವಿವಿಧ ವಲಯಗಳಲ್ಲಿ ಸಾಧನೆಗೈದ ಕಾಸರಗೋಡು ಜಿಲ್ಲಾ ಪಂಚಾಯಿತಿಗೆ ಜಿಲ್ಲಾ ಯೋಜನಾ ಸಮಿತಿ ವತಿಯಿಂದ ಪ್ರಶಸ್ತಿ ನೀಡಿ ಗೌರಿಸಲಾಯಿತು. ಶಾಸಕ ಎನ್.ಎ ನೆಲ್ಲಿಕುನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ. ಬೇಬಿ ಬಾಲಕೃಷ್ಣನ್ ಅವರಿಗೆ ಅರ್ಹತಾ ಪತ್ರ ನೀಡಿ ಗೌರವಿಸಿದರು.
ಅದೇ ರಈತಿ ವಿವಿಧ ವಲಯಗಳಲ್ಲಿ ವಿಶಿಷ್ಟ ಸಾಧನೆಗೈದ ವಲಿಯಪರಂಬ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಿಲಿಕೋಡು ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಸಾಮಾಜಿಕ ನೀತಿ ಇಲಾಖೆಗಳಿಗೆ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ. ಬೇಬಿ ಬಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಯೋಜನಾಧಿಕಾರಿ ಟಿ. ರಾಜೇಶ್ ಸಾಧನೆಗಳ ಬಗ್ಗೆ ವಿವರಿಸಿದರು. ಶಾಸಕರಾದ ಅಡ್ವ. ಸಿ.ಎಚ್.ಕುಞಂಬು, ಎಂ.ರಾಜಗೋಪಾಲನ್, ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್, ಡಿಪಿಸಿ ಸರ್ಕಾರದ ನಾಮನಿರ್ದೇಶಿತ ಸಿ. ರಾಮಚಂದ್ರನ್, ಡಿಸಿಪಿ ಸದಸ್ಯರು ಉಪಸ್ಥಿತರಿದ್ದರು.