ಕಾಸರಗೋಡು: ಪರಿಶಿಷ್ಟ ವರ್ಗ ಅಭಿವೃದ್ಧಿ ಇಲಾಖೆ ಮತ್ತು ಮಾಹಿತಿ ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ವಾರ್ತಾ ಕಛೇರಿ ಜಂಟಿಯಾಗಿ ಕಾಸರಗೋಡು ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದವರಿಗಾಗಿ ಮಾಧ್ಯಮ ಕಾರ್ಯಾಗಾರವನ್ನು ಡಿಸೆಂಬರ್‍ನಲ್ಲಿ ನಡೆಸಲು ತೀರ್ಮಾನಿಸಿದೆ. ಮಾಧ್ಯಮ ಕ್ಷೇತ್ರದಲ್ಲಿ ಆಸಕ್ತಿಯುಳ್ಳವರು ಮತ್ತು ಮಾಧ್ಯಮ ಕ್ಷೇತ್ರದ ಉದ್ಯೋಗಾವಕಾಶಗಳನ್ನು ತಿಳಿಯಲು ಆಸಕ್ತಿಯಿರುವವರು ತಮ್ಮ ಹೆಸರು, ಫೆÇೀನ್ ಸಂಖ್ಯೆ ಮತ್ತು ವಿಳಾಸವನ್ನು ಡಿಸೆಂಬರ್ 5 ರೊಳಗೆ ಜioಞsgಜ@gmಚಿiಟ.ಛಿom ಎಂಬ ಇ-ಮೇಲ್ ವಿಳಾಸದಲ್ಲಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಾರ್ತಾ ಕಛೇರಿಯನ್ನು ಸಂಪರ್ಕಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ(8547860180)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.