HEALTH TIPS

ಟ್ರಂಪ್ ಜತೆ ಮಾತುಕತೆಗೆ ಸಿದ್ಧವಿದ್ದೇನೆ: ಪುಟಿನ್

 ಮಾಸ್ಕೊ: ಅಮೆರಿಕದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉಕ್ರೇನ್ ಯುದ್ಧ ಸಂಬಂಧ ಮಾತುಕತೆಗೆ ಸಿದ್ಧವಿರುವುದಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ.

ಟ್ರಂಪ್ ಅವರೊಂದಿಗಿನ ಮಾತುಕತೆಯನ್ನು ಸ್ವಾಗತಿಸಿರುವ ಪುಟಿನ್, 'ನಾನು ಟ್ರಂಪ್ ಅವರನ್ನು ಯಾವಾಗ ಭೇಟಿಯಾಗಲಿದ್ದೇನೆ ಎಂಬುದು ತಿಳಿದಿಲ್ಲ.


ಅವರು ಕೂಡ ಏನನ್ನೂ ಹೇಳಿಲ್ಲ. ಕಳೆದ ನಾಲ್ಕು ವರ್ಷಗಳಿಂದ ಅವರ ಜತೆ ಮಾತುಕತೆ ನಡೆಸಿಲ್ಲ. ಆದರೆ ಯಾವಾಗ ಬೇಕಾದರೂ ಭೇಟಿಯಾಗಲು ಸಿದ್ಧವಿದ್ದೇನೆ' ಎಂದು ಹೇಳಿದ್ದಾರೆ.

ಅಮೆರಿಕದ ಚುನಾಯಿತ ಅಧ್ಯಕ್ಷರೊಂದಿಗೆ ಎಂದಾದರೂ ಚರ್ಚೆ ನಡೆಸಲು ಅವಕಾಶ ಸಿಕ್ಕರೆ ಖಂಡಿತವಾಗಿಯೂ ಉಕ್ರೇನ್ ಒಪ್ಪಂದದ ಕುರಿತು ಮಾತುಕತೆಗೆ ಸಿದ್ಧವಿರುವುದಾಗಿ ಪುಟಿನ್ ಹೇಳಿದ್ದಾರೆ.

ಮುಂದಿನ ವರ್ಷ ಜನವರಿಯಲ್ಲಿ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್ ಅಧಿಕಾರ ವಹಿಸಲಿದ್ದಾರೆ. ಅಲ್ಲದೆ 'ನರಮೇಧ' ಕೊನೆಗೊಳಿಸಲು ಪುಟಿನ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಉತ್ಸುಕತೆ ವ್ಯಕ್ತಪಡಿಸಿದ್ದರು.

ವಾರ್ಷಿಕವಾಗಿ ನಡೆಯುವ ವರ್ಷದ ಅಂತ್ಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ 72 ವರ್ಷದ ಪುಟಿನ್, ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಮೇಲುಗೈ ಸಾಧಿಸಿದೆ. ಆದರೆ ಬಹಳ ಹಿಂದೆಯೇ ಪೂರ್ಣ ಪ್ರಮಾಣದ ಆಕ್ರಮಣ ಆರಂಭಿಸದೇ ಇರುವುದಕ್ಕೆ ವಿಷಾದ ವ್ಯಕ್ತಪಡಿಸಿದರು.

'ಈಗ ಏನಾಗುತ್ತಿದೆ ಎಂದು ಗಮನಿಸಿದಾಗ ಆ ನಿರ್ಧಾರವನ್ನು ಹಿಂದೆಯೇ ತೆಗೆದುಕೊಳ್ಳಬೇಕಿತ್ತು' ಎಂದು ಹೇಳಿದ್ದಾರೆ.

ಏತನ್ಮಧ್ಯೆ ಸಿರಿಯಾದಲ್ಲಿ ರಷ್ಯಾಕ್ಕೆ ಸೋಲು ಎದುರಾಗಿದೆ ಎಂಬುದನ್ನು ಒಪ್ಪಿಕೊಳ್ಳಲು ಪುಟಿನ್ ನಿರಾಕರಿಸಿದ್ದಾರೆ. ಪಲಾಯನ ಮಾಡಿರುವ ಬಶರ್ ಅಲ್‌ ಅಸ್ಸಾದ್‌ ಅವರನ್ನು ಭೇಟಿಯಾಗುವ ಯೋಜನೆಯಿದೆ ಎಂದು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries