ಬಟಿಂಡಾ: ಪಂಜಾಬ್‌ನ ಬಟಿಂಡಾದಲ್ಲಿ ಸೇತುವೆ ಮೇಲಿಂದ ಬಸ್ ಉರುಳಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಬಸ್ ತಲವಂಡಿ ಸಾಬೊ ಮಾರ್ಗವಾಗಿ ಬಟಿಂಡಾ ಕಡೆಗೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
ಪೊಲೀಸರು ಹಾಗೂ ಸ್ಥಳೀಯರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಘಟನೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಇದು ಅವಘಡಕ್ಕೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.