ಲಖನೌ:ಪಂಜಾಬ್‌ನ ಗುರುದಾಸ್‌ಪುರದ ಪೊಲೀಸ್ ಔಟ್‌ಪೋಸ್ಟ್ ಮೇಲೆ ದಾಳಿ ನಡೆಸಿದ ಮೂವರು ಖಾಲಿಸ್ತಾನಿ ಭಯೋತ್ಪಾದಕರನ್ನು ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡ ಸೋಮವಾರ ಪಿಲಿಭಿತ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿದೆ.
ಪೊಲೀಸ್ ಮೂಲಗಳ ಪ್ರಕಾರ, ಜಿಲ್ಲೆಯ ಪುರನ್‌ಪುರ ಪ್ರದೇಶದ ಹರ್ದೋಯಿ ಶಾಖಾ ಕಾಲುವೆ ಬಳಿ ಬೆಳಗಿನ ಜಾವ ಎನ್‌ಕೌಂಟರ್ ನಡೆದಿದೆ.
ಹತ್ಯೆಯಾದ ಉಗ್ರರನ್ನು ಪ್ರತಾಪ್ ಸಿಂಗ್, ವೀರೇಂದ್ರ ಸಿಂಗ್ ಮತ್ತು ಗುರ್ವಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಅವರ ಬಳಿಯಿದ್ದ ಎರಡು ಎಕೆ-47 ರೈಫಲ್‌ಗಳು, ಎರಡು ಪಿಸ್ತೂಲ್‌ಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎನ್‌ಕೌಂಟರ್‌ನಲ್ಲಿ ಉತ್ತರ ಪ್ರದೇಶ ಪೊಲೀಸರ ಇಬ್ಬರು ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಲಿಸ್ತಾನ್ ಕಮಾಂಡೋ ಫೋರ್ಸ್‌ಗೆ ಸೇರಿದ ಮೂವರು ಭಯೋತ್ಪಾದಕರು ಪುರನ್‌ಪುರ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಮಾಹಿತಿಯ ಮೇರೆಗೆ ಉಭಯ ರಾಜ್ಯಗಳ ಪೊಲೀಸ್ ತಂಡವು ಅವರನ್ನು ಅಡ್ಡ ಹಾಕಿವೆ. ನಂತರ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.