ನವದೆಹಲಿ: 23 ವರ್ಷಗಳ ಹಿಂದೆ ಸಂಸತ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಶುಕ್ರವಾರ ಹಳೆ ಸಂಸತ್ ಭವನದ ಹೊರಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಅಮಿತ್ ಶಾ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸೇರಿದಂತೆ ಕೇಂದ್ರ ಸಚಿವರು ಹಾಗೂ ಸಂಸದರು ಭಾಗಿಯಾಗಿದ್ದರು.