ಕಾಸರಗೋಡು: ಕರ್ನಾಟಕ ಕರಾವಳಿ ಮತ್ತು ಮಧ್ಯ-ಪೂರ್ವ ಅರಬ್ಬಿ ಸಮುದ್ರದಲ್ಲಿ ಪ್ರಬಲ ವಾಯುಭಾರ ಕುಸಿತ ಕಂಡುಬಂದಿದೆ.ಈ ಹಿನ್ನೆಲೆಯಲ್ಲಿ ಮುಂದಿನ 2 ದಿನಗಳಲ್ಲಿ ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಮಧ್ಯ-ಪೂರ್ವ ಅರಬ್ಬಿ ಸಮುದ್ರದ ಮೇಲೆ ಚಲಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಕೇರಳದಲ್ಲಿ ಮುಂದಿನ 5 ದಿನಗಳಲ್ಲಿ ಗುಡುಗು ಮಿಂಚು ಸಹಿತ ಲಘು/ ಸಾಧಾರಣ ಮಳೆಯಾಗುವ ಸಾಧ್ಯತೆ.
ಇಂದು (ಡಿಸೆಂಬರ್ 4) ಅಲ್ಲಲ್ಲಿ ಅತಿ ಹೆಚ್ಚು/ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಂಗಳವಾರ ಸಂಜೆಯ ಪ್ರಕಟಣೆ ತಿಳಿಸಿದೆ.