ಇಂಫಾಲ್: ಮಣಿಪುರದ ಪೂರ್ವ ಇಂಫಾಲ್ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂದಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಜಪ್ತಿ ಮಾಡಿದ್ದಾರೆ.
ಕೈರೋ ಖುನೋ ಪ್ರದೇಶದಲ್ಲಿ ರೈಫಲ್, ಸಿಂಗಲ್ ಬ್ಯಾರೆಲ್ ಗನ್ ಮತ್ತು ಹ್ಯಾಂಡ್ ಗ್ರೆನೇಡ್‌ಗಳನ್ನು ಒಳಗೊಂಡಂತೆ ಹಲವು ಶಸ್ತ್ರಾಸ್ತ್ರಗಳು ಜಪ್ತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಖುಂಖೊ ಕುಕಿ ಗ್ರಾಮದಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.