ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗೋವಿಂದರಾಜು ಎಂ ಕಲ್ಲೂರು ಅವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕಥಾಸಂಕಲನಕ್ಕೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಸಾಂಸ್ಕøತಿಕ ಕಲಾ ಸಾಹಿತ್ಯ ವೇದಿಕೆಯು ನೀಡುವ 2023ನೇ ಸಾಲಿನ ಪ್ರತಿಷ್ಠಿತ ‘ಮಾತೆ ಗಣಪಿ ತಿಪ್ಪಯ್ಯ ಪಟಗಾರ ಸಾಹಿತ್ಯ ಪ್ರಶಸ್ತಿ’ ಲಭಿಸಿದೆ.
5 ಸಾವಿರ ರೂ.ನಗದು, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಹಾಗೂ ಸನ್ಮಾನಗಳನ್ನೊಳಗೊಂಡ ಈ ರಾಜ್ಯ ಮಟ್ಟದ ಪ್ರಶಸ್ತಿಯನ್ನು 2023ರಲ್ಲಿ ಪ್ರಕಟಗೊಂಡ ಕಥಾ ಸಂಕಲನಕ್ಕೆ ನೀಡಲು ಉದ್ದೇಶಿಸಲಾಗಿತ್ತು ಅದರಂತೆ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕಥಾಸಂಕಲನವನ್ನು ಆಯ್ಕೆಮಾಡಲಾಗಿದೆ ಎಂದು ನವಚೇತನ ಸಾಂಸ್ಕೃತಿಕ ಕಲಾ ಸಾಹಿತ್ಯ ವೇದಿಕೆಯ ಅಧ್ಯಕ್ಷ ಮಂಜುನಾಥ ಪಟಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಲ್ಲಾಪುರದ ಸಾಹಿತ್ಯ ಪ್ರೇಮಿ, ಸಾಹಿತ್ಯ ಸಂಘಟಕ ಮಂಜುನಾಥ ಪಟಗಾರ ಅವರು ತಮ್ಮ ತಾಯಿಯವರ ಹೆಸರಿನಲ್ಲಿ ‘ಮಾತೆ ಗಣಪಿ ತಿಪ್ಪಯ್ಯ ಪಟಗಾರ ಸಾಹಿತ್ಯ ಪ್ರಶಸ್ತಿ'ಯನ್ನು ಸ್ಥಾಪಿಸಿದ್ದಾರೆ.