ಕಾಸರಗೋಡು: ಕುಟುಂಬಶ್ರೀ ಕಾಸರಗೋಡು ಜಿಲ್ಲಾ ಮಿಷನ್ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಬಲೀಕರಣ, ಆರ್ಥಿಕ ಸಬಲೀಕರಣ ಮತ್ತು ಸಾಮಾಜಿಕ ಸಬಲೀಕರಣ ಕಾರ್ಯಕ್ರಮಗಳಿಗೆ ತರಬೇತಿ ನೀಡಲು ಅರ್ಹ ವ್ಯಕ್ತಿಗಳಿಂದ ಮತ್ತು ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೆಪಾಸಿಟರಿ ಸಾಫ್ಟ್ ಸ್ಕಿಲ್ ತರಬೇತಿ ನೀಡಲು ಆಸಕ್ತ ವ್ಯಕ್ತಿಗಳು ಯಾ ಸಂಸ್ಥೆಗಳು ತಮ್ಮ ಅರ್ಜಿಗಳನ್ನು ಸ್ವವಿವರದೊಂದಿಗೆ sಠಿemಞsಜ@gmಚಿiಟ.ಛಿom ಎಂಬ ಇಮೇಲ್ ನಲ್ಲಿ ಡಿಸೆಂಬರ್ 25 ರೊಳಗೆ ಕಳುಹಿಸಬೇಕು. ಈ ಬಗ್ಗೆ ಮಾಹಿತಿಗಾಘಿ ದೂರವಾಣಿ ಸಂಖ್ಯೆ (04994 256 111, 9747534723, 7907915510)ಸಂಪರ್ಕಿಸುವಂತೆ ಜಿಲ್ಲಾ ಮಿಷನ್ ಸಂಯೋಜಕ ಟಿ.ಟಿ.ಸುರೇಂದ್ರನ್ ಮಾಹಿತಿ ನೀಡಿದ್ದಾರೆ.