ಕೋಝಿಕ್ಕೋಡ್: ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದಲ್ಲಿ ಎಂಎಸ್ ಸೊಲ್ಯೂಷನ್ಸ್ ಸಿಇಒ ಶುಹೈಬ್ ಅವರ ಹಣಕಾಸು ವ್ಯವಹಾರದ ಕುರಿತು ತನಿಖೆ ನಡೆಸಲಾಗುವುದು. ಎರಡು ವರ್ಷಗಳ ಹಣಕಾಸು ವಹಿವಾಟುಗಳನ್ನು ಪರಿಶೀಲಿಸಲಾಗುವುದು.
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಹಣಕಾಸಿನ ವ್ಯವಹಾರ ನಡೆದಿದೆಯೇ ಎಂಬುದನ್ನು ಪತ್ತೆ ಹಚ್ಚುವುದು ತನಿಖೆಯ ಲಕ್ಷ್ಯ. ಶುಹೈಬ್ ಅವರ ಮೊಬೈಲ್ ಪೋನ್ ಮತ್ತು ಲ್ಯಾಪ್‍ಟಾಪ್ ಅನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗುವುದು. ಎಂಎಸ್ ಸಲ್ಯೂಷನ್ಸ್ ಕಚೇರಿಯಿಂದ ವಶಪಡಿಸಿಕೊಂಡ ಮೊಬೈಲ್ ಪೋನ್, ಲ್ಯಾಪ್‍ಟಾಪ್ ಮತ್ತು ಕಂಪ್ಯೂಟರ್ ಅನ್ನು ಸಹ ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಮೊಬೈಲ್ ಡೇಟಾವನ್ನು ಫಾಮ್ರ್ಯಾಟ್ ಮಾಡಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಅಪರಾಧ ವಿಭಾಗದ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಅಪರಾಧ ವಿಭಾಗವು ವಂಚನೆ ಮತ್ತು ನಂಬಿಕೆ ದ್ರೋಹ ಸೇರಿದಂತೆ 7 ಸೆಕ್ಷನ್‍ಗಳ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದೆ.
ತನಿಖಾ ತಂಡವು ಇತರ ಖಾಸಗಿ ಶಿಕ್ಷಣ ಸಂಸ್ಥೆಗಳ ಚಟುವಟಿಕೆಗಳ ಬಗ್ಗೆಯೂ ತನಿಖೆ ನಡೆಸುತ್ತಿದೆ. ಅವರಿಗೆ ಸಹಕರಿಸುವ ಶಿಕ್ಷಕರ ಹೇಳಿಕೆಗಳನ್ನೂ ದಾಖಲಿಸಿಕೊಳ್ಳಲಾಗುವುದು. ಪ್ರಶ್ನೆ ಪತ್ರಿಕೆ ಸೋರಿಕೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ನೆರವು ಕೂಡ ಸಿಕ್ಕಿದೆಯೇ ಎಂಬ ಬಗ್ಗೆಯೂ ತನಿಖಾ ತಂಡ ತನಿಖೆ ನಡೆಸುತ್ತಿದೆ.