ಕಾಸರಗೋಡು: ಕೇಂದ್ರ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ನಾಳೆ (ಡಿಸೆಂಬರ್ 3) ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಕೆ.ಇನ್ಭಾಶೇಖರ್ ರಜೆ ಘೋಷಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೂ ರಜೆ ಅನ್ವಯಿಸುತ್ತದೆ