ನಾರಾಯಣಪುರ: ಗುರುವಾರ ಮುಂಜಾನೆ ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ಮಧ್ಯ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಹಾಗೂ ನಕ್ಸಲ್ ನಿಗ್ರಹ ದಳ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ ದಕ್ಷಿಣ ಅಬುಜ್‌ಮಾದ್‌ನ ಕಾಡಿನಲ್ಲಿ ಮುಂಜಾನೆ 3 ಗಂಟೆಗೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿಸಿದ್ದಾರೆ.
ನಾರಾಯಣಪುರ, ದಾಂತೇವಾಡ, ಬಾಸ್ತರ್ ಹಾಗೂ ಕೊಂಡಗಾವ್‌ನ ಜಿಲ್ಲಾ ಮೀಸಲು ಪಡೆಗಳು ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳು ಕಾರ್ಯಾಚರಣೆ ನಡೆಸಿವೆ.
ಗುಂಡಿನ ಕಾಳಗ ಜಾರಿಯಲ್ಲಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.