ನವದೆಹಲಿ: ಸಂಸತ್ ಆವರಣದಲ್ಲಿ ಗುರುವಾರ ನಡೆದ ತಳ್ಳಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಗಾಯಗೊಂಡಿರುವ ಇಬ್ಬರು ಬಿಜೆಪಿ ಸಂಸದರ ಹೇಳಿಕೆಗಳನ್ನು ದಾಖಲಿಸುವ ಸಾಧ್ಯತೆಯಿದೆ.
ಈ ಘಟನೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಒದಗಿಸುವಂತೆ ದೆಹಲಿ ಪೊಲೀಸರು ಸಂಸತ್ತಿನ ಕಾರ್ಯಾಲಯಕ್ಕೆ ಪತ್ರ ಬರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪೊಲೀಸರು, ಗಾಯಗೊಂಡಿರುವ ಸಂಸದರಾದ ಪ್ರತಾಪ್ ಸಾರಂಗಿ ಮತ್ತು ಮುಕೇಶ್ ರಜಪೂತ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಹೇಳಿಕೆ ಪಡೆಯಲಿದ್ದಾರೆ. ಅಲ್ಲದೆ ರಾಹುಲ್ ಗಾಂಧಿ ಅವರನ್ನು ಕರೆಸಿ ಪ್ರಶ್ನಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಬಿಜೆಪಿ ಸಂಸದರಾದ ಹೇಮಾಂಗ್ ಜೋಶಿ, ಅನುರಾಗ್ ಠಾಕೂರ್, ಬಾನ್ಸುರಿ ಸ್ವರಾಜ್ ಅವರು ರಾಹುಲ್ ಗಾಂಧಿ ವಿರುದ್ಧ ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅಪರಾಧ ವಿಭಾಗಕ್ಕೆ ವರ್ಗ:
ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ದೆಹಲಿ ಪೊಲೀಸರು ಶುಕ್ರವಾರ ಅಪರಾಧ ವಿಭಾಗಕ್ಕೆ ವರ್ಗಾಯಿಸಿದರು. ಈ ಪ್ರಕರಣದ ತನಿಖೆಯನ್ನು ಇನ್ನು ಅಪರಾಧ ವಿಭಾಗದವರು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆರೋಗ್ಯ ಸ್ಥಿತಿ ಸುಧಾರಣೆ:
ತಳ್ಳಾಟದಲ್ಲಿ ಗಾಯಗೊಂಡಿದ್ದ ಇಬ್ಬರು ಸಂಸದರ ಆರೋಗ್ಯ ಸ್ಥಿತಿ ಈಗ ಸುಧಾರಿದ್ದು, ಅವರನ್ನು ಇಲ್ಲಿನ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ಐಸಿಯುನಲ್ಲಿ ನಿಗಾವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಸಂಸದೆಅಂಬೇಡ್ಕರ್ ಬಗ್ಗೆಗಿನ ಬಿಜೆಪಿ ಭಾವನೆಗಳು ಬಹಿರಂಗವಾಗಿದ್ದರಿಂದ ಅದು ಹೆದರುತ್ತಿದೆ. ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಸರ್ಕಾರದ ಹತಾಶೆಯನ್ನು ತೋರಿಸುತ್ತದೆಜೈರಾಮ್ ರಮೇಶ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಅಮಿತ್ ಶಾ ಅವರ ಹೇಳಿಕೆಯ ವಿವಾದದಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ನಾಟಕವಾಡಿದೆ. ಮೋದಿ ಅವರ ಎರಡು ಆಧಾರ ಸ್ತಂಭಗಳು (ಅಮಿತ್ ಶಾ ಗೌತಮ್ ಅದಾನಿ) ಕೆಟ್ಟದಾಗಿ ಹಾನಿಗೊಳಗಾಗಿವೆ.