ಪ್ರಯಾಗ್‌ರಾಜ್: ಉತ್ತರ ಪ್ರದೇಶ ಪ್ರಯಾಗ್‌ರಾಜ್‌ಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, 2025ರ ಮಹಾ ಕುಂಭಮೇಳಕ್ಕೆ ಮೂಲಭೂತ ಸೌಕರ್ಯ ಮತ್ತು ಇತರೆ ಸೌಲಭ್ಯಗಳನ್ನು ಸುಧಾರಿಸುವ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಅದಕ್ಕೂ ಮುನ್ನ ಮೂರು ನದಿಗಳ ಸಂಗಮ ಸ್ಥಳದಲ್ಲಿ ಪೂಜೆ ಸಲ್ಲಿಸಿದರು.
ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಪವಿತ್ರ ಸಂಗಮದಲ್ಲಿ ವಿಧ್ಯುಕ್ತ ಪೂಜೆ ಸಲ್ಲಿಸಿದ ಪ್ರಧಾನಿ, ಪೂಜೆಗೂ ಮುನ್ನ ನದಿ ವಿಹಾರ ನಡೆಸಿದರು.
ಪ್ರಧಾನಿ ಜೊತೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.