ಮಂಜೇಶ್ವರ: ಮಹಾಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಗ್ರಂಥಾಲಯ ಗಿಳಿವಿಂಡು ಮಂಜೇಶ್ವರ ಇದರ ಆಶ್ರಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಸಹಯೋಗದೊಂದಿಗೆ ಕನ್ನಡ ಚಿಂತನೆ ಕಾರ್ಯಕ್ರಮ ಇಂದು ಅಪರಾಹ್ನ 3 ರಿಂದ ಗೋವಿಂದ ಪೈ ಸ್ಮಾರಕ ಗಿಳಿವಿಂಡಲ್ಲಿ ನಡೆಯಲಿದೆ.
ನಾಡೋಜ ಕಿಞ್ಞಣ್ಣ ರೈ ಕೃತಿ-ಸ್ಮøತಿ ವಿಷಯದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬದಿಯಡ್ಕದ ಕವಿ ನಿಲಯ ಕವಿತಾ ಕುಟೀರದ ಕಾರ್ಯದರ್ಶಿ ಡಾ.ಪ್ರಸನ್ನ ರೈ ಹಾಗೂ ಮಂಗಳೂರಿನ ಆರ್ಟ್ ಕೆನರಾ ಟ್ರಸ್ಟಿನ ಕಾರ್ಯದರ್ಶಿ ನೇಮಿರಾಜ ಶೆಟ್ಟಿ ವಿಶೇಷ ಉಪನ್ಯಾಸ ನೀಡುವರು. ಮಹಾಕವಿ ಗೋವಿಂದ ಪೈ ಸ್ಮಾರಕ ಗ್ರಂಥಾಲಯದ ಅಧ್ಯಕ್ಷ ಉಮೇಶ ಎಂ.ಸಾಲ್ಯಾನ್ ಅಧ್ಯಕ್ಷತೆ ವಹಿಸುವರು. ಕೇರಳ ತುಳು ಅಕಾಡೆಮಿ ಅಧ್ಯಕ್ಷ ಕೆ.ಆರ್.ಜಯಾನಂದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಗ್ರಂಥಾಲಯದ ಜೊತೆ ಕಾರ್ಯದರ್ಶಿ ಜಯಂತ ಮಾಸ್ತರ್ ಉಪಸ್ಥಿತರಿರುವರು.