ಹೈದರಾಬಾದ್: ತೆಲಂಗಾಣದ ಮುಲುಗು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಏಳು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಎತುರ್ ನಗರದಲ್ಲಿ ಕೂಂಬಿಂಗ್ ಕಾರ್ಯಾಚರಣೆ ವೇಳೆ ನಕ್ಸಲ್ ನಿಗ್ರಹ ದಳ ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.