ಮಾಸ್ಕೊ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಗೆ ತಯಾರಿ ನಡೆಯುತ್ತಿದೆ ಎಂದು ಕ್ರೆಮ್ಲಿನ್ ಸೋಮವಾರ ಹೇಳಿದೆ. ಆದರೆ ನಿಖರ ದಿನಾಂಕದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಪುಟಿನ್ ಅವರು 2025ರ ಆದಿಯಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಕ್ರೆಮ್ಲಿನ್ ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಎನ್-ನ್ಯೂಸ್ 18 ಈ ಹಿಂದೆ ವರದಿ ಮಾಡಿತ್ತು.