ಕಾಸರಗೋಡು: ಕೇರಳ ಮೋಟಾರು ಕಾರ್ಮಿಕರ ಕಲ್ಯಾಣ ನಿಧಿಯ ಸದಸ್ಯರಾಗಿರುವ ಕಾರ್ಮಿಕರ ಮಕ್ಕಳಿಗೆ 2023-24ನೇ ಶೈಕ್ಷಣಿಕ ವರ್ಷದಲ್ಲಿ ಕಲೆ, ಕ್ರೀಡೆ ಮತ್ತು ಶಿಕ್ಷಣದಲ್ಲಿ ಉತ್ತಮ ಸಾಧನೆ ಗಳಿಸಿದವರಿಗೆ ವಿಶೇಷ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಬಿಳಿ ಕಾಗದದಲ್ಲಿ ಬರೆದ ಅರ್ಜಿ, ಪ್ರಮಾಣಪತ್ರಗಳ ದೃಢೀಕೃತ ಪ್ರತಿಗಳ ಸಹಿತ ಡಿಸೆಂಬರ್ 15ರೊಳಗೆ ಜಿಲ್ಲಾ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ(0467 2205380)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.