ಮುಳ್ಳೇರಿಯ: ಜಿಲ್ಲೆಯ ಪರಿಶಿಷ್ಟ ಜಾತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ನೇತೃತ್ವದಲ್ಲಿ ಬಂದಡ್ಕ ಟೌನ್ ಉನ್ನತಿ ಕುಡಿಯುವ ನೀರಿನ ಯೋಜನೆ ಅನುμÁ್ಠನಗೊಳಿಸಲಾಗುತ್ತಿದೆ. ಜಿಲ್ಲಾ ಪಂಚಾಯತಿ ಆರೋಗ್ಯ-ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ವಕೀಲೆ ಎಸ್.ಎನ್.ಸರಿತಾ ಉದ್ಘಾಟಿಸಿದರು. ಕುತ್ತಿಕೋಲ್ ಗ್ರಾ.ಪಂ ಅಧ್ಯಕ್ಷ ಮುರಳಿ ಪಯ್ಯಂಗಾನಂ ಅಧ್ಯಕ್ಷತೆ ವಹಿಸಿದ್ದರು. ಕಾರಡ್ಕ ಬ್ಲಾಕ್ ಪಂಚಾಯತಿ ಸದಸ್ಯ ಬಿ. ಕೃಷ್ಣನ್, ಕುತ್ತಿಕೋಲ್ ಗ್ರಾಮ ಪಂಚಾಯಿತಿ ಸದಸ್ಯ ಕೆ ಕುಂಞÂ್ಞ ರಾಮನ್ ತವನಂ, ರಾಜಕೀಯ ಪಕ್ಷದ ಪ್ರತಿನಿಧಿಗಳಾದ ಪಿ.ವಿ.ಸುರೇಶ್, ಉಮ್ಮರ್, ನೀಲಕಂಠನ್, ಮಹೇಶ್ ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು. ಕಾಸರಗೋಡು ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ಕೆ.ಕೆ.ಮೋಹನ್ ದಾಸ್ ಸ್ವಾಗತಿಸಿ, ಬಂದಡ್ಕ ಟೌನ್ ಉನ್ನತಿ ಪ್ರತಿನಿಧಿ ರಘು ವಂದಿಸಿದರು.
ಇಲ್ಲಿಯ ಉನ್ನತಿ ಕೇಂದ್ರದಲ್ಲಿ ನಿರ್ಮಿಸಲಾದ ಕುಡಿಯುವ ನೀರಿನ ಯೋಜನೆ 2021-22 ವಾರ್ಷಿಕ ಯೋಜನೆಯಲ್ಲಿ ಒಳಗೊಂಡಿರುವ ಕುಡಿಯುವ ನೀರಿನ ಯೋಜನೆಯಾಗಿದ್ದು,4.26 ಲಕ್ಷ ರೂ.ಗಳನ್ನು ವ್ಯಯಿಸಲಾಗಿದೆ.