ಆಗರ್ ಮಾಲ್ವಾ : 'ಒಂದು ರಾಷ್ಟ್ರ, ಒಂದು ಚುನಾವಣೆ'ಗೆ ಸಂಬಂಧಿಸಿದ ಮಸೂದೆಯು ಸಂಸತ್ತಿನಲ್ಲಿ ಅಂಗೀಕಾರವಾಗುವುದು ಅನುಮಾನ' ಎಂದು ರಾಜ್ಯಸಭೆಯ ಕಾಂಗ್ರೆಸ್ ಸದಸ್ಯ ದಿಗ್ವಿಜಯ್ ಸಿಂಗ್ ತಿಳಿಸಿದರು.
'ಜಂಟಿ ಸಂಸದೀಯ ಸಮಿತಿ ರಚನೆಯಾಗಿದೆ. ಆದರೆ, ಮಸೂದೆಯನ್ನು ಅಂಗೀಕರಿಸಲಾಗುತ್ತದೆ ಎಂದು ನಾನು ಭಾವಿಸುವುದಿಲ್ಲ' ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.