ನವದೆಹಲಿ: ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ಮಸೀದಿ ಆವರಣಕ್ಕೆ ನುಗ್ಗಿ 'ಜೈ ಶ್ರೀರಾಮ್' ಘೋಷಣೆ ಕೂಗಿದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ.
ಕೀರ್ತನ್ ಕುಮಾರ್ ಮತ್ತು ಸಚಿನ್ ಕುಮಾರ್ ಎನ್.ಎಂ. ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಮತ್ತು ಕ್ರಿಮಿನಲ್ ಮೊಕದ್ದಮೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ರದ್ದುಗೊಳಿಸಿತ್ತು.