ನವದೆಹಲಿ: ಉದ್ಯೋಗಕ್ಕಾಗಿ ಹಣ ಹಗರಣಕ್ಕೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡಿನ ಸಚಿವ ವಿ. ಸೆಂಥಿಲ್ ಬಾಲಾಜಿ ಅವರಿಗೆ ಜಾಮೀನು ಮಂಜೂರು ಮಾಡಿದ ಕ್ರಮವನ್ನು ಪುನರ್ ಪರಿಶೀಲನೆಗೆ ಒಳಪಡಿಸಬೇಕು ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇರುವ ವಿಭಾಗೀಯ ಪೀಠವು ಡಿಸೆಂಬರ್ 17ರಂದು ಈ ತೀರ್ಮಾನ ಕೈಗೊಂಡಿದೆ. ಪೀಠದ ತೀರ್ಮಾನವನ್ನು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಶನಿವಾರ ಪ್ರಕಟಿಸಲಾಗಿದೆ.
ಜಾಮೀನು ಆದೇಶ ಹಿಂಪಡೆಯುವಂತೆ ಕೋರಿರುವ ಅರ್ಜಿಯೊಂದು ವಿಚಾರಣೆಯ ಹಂತದಲ್ಲಿ ಇದೆ ಎಂದು ಪೀಠ ಹೇಳಿದೆ.