ಅಹಮದಾಬಾದ್: ಗುಜರಾತ್ ರಾಜ್ಯದ ಭರೂಚ್ ನಗರದಲ್ಲಿ ಕೈಗಾರಿಕ ಘಟಕವೊಂದರ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಅಂಕ್ಲೇಶ್ವರ್ ಜಿಐಡಿಸಿ ಪ್ರದೇಶದ ಕೈಗಾರಿಕಾ ಘಟಕದಲ್ಲಿ ಮಂಗಳವಾರ ಮಧ್ಯಾಹ್ನ ಈ ಸ್ಫೋಟ ಸಂಭವಿಸಿದೆ.
ಡಿಟಾಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಆವರಣದಲ್ಲಿ ಕಾರ್ಮಿಕರು ಟ್ಯಾಂಕ್ ಮೇಲೆ ಕೈಗಾರಿಕಾ ತ್ಯಾಜ್ಯ ನಿರ್ವಹಣೆ ಕೆಲಸ ಮಾಡುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.