ನವದೆಹಲಿ: ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಆಡಿದ ಮಾತಿನ ವಿರುದ್ಧ ತನ್ನ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲು ಕಾಂಗ್ರೆಸ್ ನಿರ್ಧರಿಸಿದೆ.
'ಡಾ. ಅಂಬೇಡ್ಕರ್ ಸಮ್ಮಾನ ಸಪ್ತಾಹ'ವನ್ನಾಗಿ ಆಚರಿಸಲು ಪಕ್ಷ ಮುಂದಾಗಿದೆ.
'ಈ ಬಳಿಕ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಯ ಸಭೆಯೂ ನಡೆಯಲಿದ್ದು, ಪಕ್ಷದ ಮುಂದಿನ ಕಾರ್ಯಯೋಜನೆಗಳು ಏನಾಗಬೇಕು, ಅಮಿತ್ ಶಾ ಅವರ ಮಾತಿನ ಸಂಬಂಧ ಪಕ್ಷವು ಏನೆಲ್ಲಾ ಕಾರ್ಯತಂತ್ರಗಳನ್ನು ಕೈಗೊಳ್ಳಬೇಕು ಎನ್ನುವ ಕುರಿತು ಚರ್ಚೆ ನಡೆಯಲಿದೆ. ಪಕ್ಷದ ಮಟ್ಟಿಗೆ ಈ ಸಭೆಯು ಬಹಳ ಮುಖ್ಯವಾಗಿದೆ' ಎಂದು ಪವನ್ ಖೇರಾ ಮಾಹಿತಿ ನೀಡಿದರು.
ಸಪ್ತಾಹದಲ್ಲಿ ಏನಿರಲಿದೆ?
ಪಕ್ಷದ ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲ ಸಂಸದರು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಡಿ. 22 ಹಾಗೂ 23ರಂದು ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿ ದೇಶದಾದ್ಯಂತ ಜಿಲ್ಲಾ ಮಟ್ಟದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ
ಡಿ.24ರಂದು 'ಬಾಬಾ ಸಾಹೇಬ್ ಅಂಬೇಡ್ಕರ್ ಸಮ್ಮಾನ್ ಮಾರ್ಚ್' ಆಯೋಜನೆ. ಜಿಲ್ಲಾ ಮಟ್ಟದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ದೊಡ್ಡ ಮಟ್ಟದ ಮೆರವಣಿಗೆ ನಡೆಸಲು ನಿರ್ಧಾರ. ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರಪತಿ ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಪತ್ರ