ಕಾಸರಗೋಡು: ವಿದ್ಯುತ್ ಬೆಲೆ ಏರಿಕೆ ಖಂಡಿಸಿ ಮಚರ್ಂಟ್ಸ್ ಅಸೋಸಿಯೇಶನ್ ವತಿಯಿಂದ ವರ್ತಕರ ಮತ್ತು ಕೈಗಾರಿಕಾ ಸಮನ್ವಯ ಸಮಿತಿಯು ಕಾಸರಗೋಡಿನಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.
ವಿದ್ಯುತ್ ಶುಲ್ಕ ಹೆಚ್ಚಳ ವಿರೋಧಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಪ್ರತಿಭಟನೆಯ ಅಂಗವಾಗಿ ಕಾಸರಗೋಡಿನಲ್ಲಿ ಪಂಜಿನ ಪ್ರದರ್ಶನ ಆಯೋಜಿಸಲಾಗಿತ್ತು. ವರ್ತಕರ ಸಂಘದ ಅಧ್ಯಕ್ಷ ಟಿ.ಎ. ಇಲ್ಯಾಸ್, ಪ್ರಧಾನ ಕಾರ್ಯದರ್ಶಿ ಕೆ.ದಿನೇಶ್, ಕೋಶಾಧಿಕಾರಿ ನಹೀಂ ಅಂಕೋಲಾ ಹಾಗೂ ಜಿಲ್ಲಾ ಸಮಿತಿ ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು. ಕಾಸರಗೋಡು ನಗರದ ವಿವಿಧೆಡೆ ಪಂಜಿನ ಮೆರವಣಿಗೆ ನಡೆಸುವ ಮೂಲಕ ವಿದ್ಯುತ್ ಬೆಲೆಯೇರಿಸಿರುವ ಎಡರಂಗ ಸರ್ಕಾರದ ಕ್ರಮವನ್ನು ಖಂಡಿಸಲಾಯಿತು.