ಕುಂಬಳೆ: ಕಾಸರಗೋಡು ಜಿಲ್ಲೆಯ ಗಣಿತ ಕ್ಲಬ್ ಅಸೋಸಿಯೇಶನ್ ನ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಶ್ರೀನಿವಾಸ ರಾಮಾನುಜನ್ ಪೇಪರ್ ಪ್ರೆಸೆಂಟೇಶನ್ ಸ್ಪರ್ಧೆಯಲ್ಲಿ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ತನುಷ್ ಬಿ ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತನ ಸಾಧನೆಗೆ ವ್ಯವಸ್ಥಾಪಕರು, ಮುಖ್ಯೋಪಾಧ್ಯಾಯರು, ರಕ್ಷಕ ಶಿಕ್ಷಕ ಸಂಘ, ಶಿಕ್ಷಕ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.