ನವದೆಹಲಿ: ಮತದಾರರ ಪಟ್ಟಿಯನ್ನು ದುರ್ಬಳಕೆ ಮಾಡಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಆರೋಪಿಸಿದರು.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ಈಗಾಗಲೇ ದೆಹಲಿಯಲ್ಲಿ ತನ್ನ ಸೋಲನ್ನು ಒಪ್ಪಿಕೊಂಡಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಮರ್ಥ ಅಭ್ಯರ್ಥಿಯಿಲ್ಲ. ಹಾಗಾಗಿ ಅವರು ವಾಮ ಮಾರ್ಗಗಳ ಮೂಲಕ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ಮತದಾರರ ಪಟ್ಟಿಯನ್ನು ದುರ್ಬಳಕೆ ಮಾಡುವಂತಹ ತಂತ್ರಗಳನ್ನು ಅನುಸರಿಸುತ್ತಿದ್ದಾರೆ. ಆದರೆ ನಾವು ಅವರನ್ನು ಯಶಸ್ವಿಯಾಗಲು ಬಿಡುವುದಿಲ್ಲ ಎಂದು ಹೇಳಿದರು.
ಡಿಸೆಂಬರ್ 15ರಿಂದ ಆಪರೇಷನ್ ಕಮಲ ಹೆಸರಿನಲ್ಲಿ ಬಿಜೆಪಿ ಕಾರ್ಯಾಚರಣೆ ಆರಂಭಿಸಿದ್ದು, ತಮ್ಮ ವಿಧಾನಸಭಾ ಕ್ಷೇತ್ರವಾದ ನವದೆಹಲಿಯಲ್ಲಿ ಇದುವರೆಗೆ 5,000 ಮತದಾರರ ಹೆಸರನ್ನು ಅಳಿಸಿ ಹಾಕಲು ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದೂ ಕೇಜ್ರಿವಾಲ್ ದೂರಿದರು.