ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡಣವೀಸ್ ಅವರ ಹೆಸರು ಅಂತಿಮಗೊಂಡಿದೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಭಾನುವಾರ ರಾತ್ರಿ ತಿಳಿಸಿದ್ದಾರೆ.
ಡಿಸೆಂಬರ್ 2 ಅಥವಾ 3ರಂದು ಬಿಜೆಪಿ ಶಾಸಕರ ಸಭೆ ನಡೆಯಲಿದೆ. ಈಗಾಗಲೇ ದೇವೇಂದ್ರ ಫಡಣವೀಸ್ ಅವರ ಹೆಸರು ಅಂತಿಮವಾಗಿದೆ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.
ಆದರೆ ಪಿಟಿಐ ಸುದ್ದಿ ಸಂಸ್ಥೆ ಆ ನಾಯಕರ ಹೆಸರನ್ನು ಬಹಿರಂಗಪಡಿಸಿಲ್ಲ
ಮಹಾಯುತಿ ಸರ್ಕಾರದ ಪ್ರಮಾಣ ವಚನ ಸಮಾರಂಭ ಡಿಸೆಂಬರ್ 5ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಇದರಲ್ಲಿ ಭಾಗವಹಿಸಲಿದ್ದಾರೆ.
ದೇವೇಂದ್ರ ಫಡಣವೀಸ್ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಎರಡನೇ ಅವಧಿಯಲ್ಲಿ ಅವರು ಕೆಲವು ದಿನಗಳು ಮಾತ್ರ ಸಿಎಂ ಆಗಿದ್ದರು. ಆ ಬಳಿಕ ಅವರು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದರು.