ರಾಯಪುರ: ಛತ್ತೀಸಗಢದ ಸಶಸ್ತ್ರ ಪಡೆಯ (ಸಿಎಎಫ್) ಯೋಧಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ,
ಮೃತರನ್ನು ಸಿಎಎಫ್‌ನ 14ನೇ ಬೆಟಾಲಿಯನ್‌ಗೆ ಸೇರಿದ ಅನಿಲ್ ಸಿಂಗ್ ಗಹರ್ವಾರ್ ಎಂದು ಗುರುತಿಸಲಾಗಿದೆ.
ಇಲ್ಲಿನ ರಾಖಿ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸ್ ಹೆಡ್‌ಕ್ವಾರ್ಟರ್‌ನಲ್ಲಿ ಅನಿಲ್ ತಮ್ಮ ಸರ್ವೀಸ್ ರೈಫಲ್‌ನಿಂದಲೇ ಗುಂಡು ಹಾರಿಸಿಕೊಂಡು ಭಾನುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಂಡಿನ ಸದ್ದು ಕೇಳಿ ಆತನ ಸಹೋದ್ಯೋಗಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಅಷ್ಟರ ಹೊತ್ತಿಗೆ ಅನಿಲ್ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ
ಈ ಘಟನೆ ಕುರಿತು ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ. ಆತನ ಸಾವಿಗೆ ನಿಖರವಾದ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.