HEALTH TIPS

ಇವಿಎಂ ತಿರುಚುವಿಕೆ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಚುನಾವಣಾಧಿಕಾರಿ

ಮುಂಬೈ: ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರವನ್ನು(ಇವಿಎಂ) ತಿರುಚಲಾಗಿದೆ ಎಂಬ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಂದು ಮುಖ್ಯ ಚುನಾವಣಾಧಿಕಾರಿ ಎಸ್. ಚೊಕ್ಕ ಲಿಂಗಮ್ ಎಚ್ಚರಿಕೆ ನೀಡಿದ್ಧಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಮಹಾ ವಿಕಾಸ್ ಆಘಾಡಿ ನಾಯಕರು ಆರೋಪಿಸುತ್ತಿರುವ ಬೆನ್ನಲ್ಲೇ ಚುನಾವಣಾಧಿಕಾರಿ ಹೇಳಿಕೆ ಹೊರಬಿದ್ದಿದೆ.

ಈ ರೀತಿಯ ವಿವಾದಗಳನ್ನು ಅತಿರಂಜಿತಗೊಳಿಸುವ ಯಾವುದೇ ಪ್ರಯತ್ನ ಕಂಡುಬಂದರೂ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

ನಾನು ಇವಿಎಂ ಹ್ಯಾಕ್ ಮಾಡಬಲ್ಲೆ ಎಂದು ವಿದೇಶದಲ್ಲಿ ಕುಳಿತು ಹೇಳಿಕೆ ನೀಡಿದ್ದ ಸೈಯದ್‌ ಶುಜಾ ಎಂಬವನ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್‌ ದಾಖಲಿಸಿದ್ದು, ಪ್ರಕರಣದ ತನಿಖೆಯಪ್ರಗತಿ ಸಂಬಂಧ ಅಧಿಕಾರಿಗಳಿಗೆ ಪತ್ರ ಬರೆದಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂಬಂಧ ದೆಹಲಿ ಮತ್ತು ಮುಂಬೈ ಪೊಲೀಸರು ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದಾರೆ. ಇವಿಎಂ ಬಗ್ಗೆ ಸುಳ್ಳು ಸುದ್ದಿ ಹರಡುವ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರುವ ಅಥವಾ ಈ ದುರುದ್ದೇಶಪೂರಿತ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಗುರುತಿಸಿ, ಬಂಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅಂತಹ ಕೃತ್ಯಗಳು ಗಂಭೀರ ಅಪರಾಧವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅಧಿಕಾರಿ ಒತ್ತಿ ಹೇಳಿದ್ದಾರೆ.

ಇದಕ್ಕೂ ಮುನ್ನ, ಮಹಾರಾಷ್ಟ್ರದ ಎನ್‌ಸಿಪಿ (ಶರದ್ ಪವಾರ್ ಬಣ) ಮುಖ್ಯಸ್ಥ ಜಯಂತ್ ಪಾಟೀಲ್ ಅವರು ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳ ಬಳಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು, ಸಂಜೆ 5 ಗಂಟೆಯ ನಂತರ ಮತದಾನದ ಪ್ರಮಾಣ ಹೆಚ್ಚಾಗಿದ್ದನ್ನು ಪ್ರಶ್ನಿಸಿದ್ದರು. ಚುನಾವಣಾ ಪ್ರಕ್ರಿಯೆಯಲ್ಲಿ ಸಾರ್ವಜನಿಕ ನಂಬಿಕೆಯನ್ನು ಮರುಸ್ಥಾಪಿಸಲು ಮತಪತ್ರಗಳನ್ನು ಮರಳಿ ತರುವಂತೆ ಅವರು ಕರೆ ನೀಡಿದ್ದರು.

ಗಮನಾರ್ಹವಾಗಿ, ಇತ್ತೀಚೆಗೆ ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಭಾರಿ ಹಿನ್ನಡೆ ಅನುಭವಿಸಿದೆ. 288 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಅದರ ಮೈತ್ರಿಕೂಟದ ಪಾಲುದಾರ ಪಕ್ಷ ಶಿವಸೇನೆ (ಯುಬಿಟಿ) 20 ಸ್ಥಾನಗಳನ್ನು ಗೆದ್ದರೆ, ಎನ್‌ಸಿಪಿ (ಶರದ್ ಪವಾರ್ ಬಣ) ಕೇವಲ 10 ಸ್ಥಾನಗಳನ್ನು ಗಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries