ಕಾಸರಗೋಡು: ಅಯ್ಯಂಕಾಳಿ ಸ್ಮಾರಕ ಟ್ಯಾಲೆಂಟ್ ಸರ್ಚ್ ಆ್ಯಂಡ್ ಡೆವಲಪ್ ಮೆಂಟ್ ಯೋಜನೆಯನ್ವಯ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿಯಿದ್ದರೂ ಕೌಟುಂಬಿಕ ಮತ್ತು ಆರ್ಥಿಕ ಹಿನ್ನೆಲೆಯಿಂದ ಸಾಧನೆ ಮಾಡಲು ಸಾಧ್ಯವಾಗದ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡಲಾಗುವುದು.
2024-25ನೇ ಶೈಕ್ಷಣಿಕ ವರ್ಷದಲ್ಲಿ 5 ಮತ್ತು 8ನೇ ತರಗತಿಯಲ್ಲಿ ಓದುತ್ತಿರುವ ಹಾಗೂ 4 ಮತ್ತು 7ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಗ್ರೇಡ್ ಪಡೆದಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 4 ಮತ್ತು 7ನೇ ತರಗತಿಗಳಲ್ಲಿ ಅಧ್ಯಯನ ಮಾಡಿರಬೇಕು ಮತ್ತು ಯೋಜನೆಯ ಅವಧಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತಮ್ಮ ಅಧ್ಯಯನವನ್ನು ಮುಂದುವರಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂ. ಮೀರಬಾರದು. ಅರ್ಜಿ ನಮೂನೆಯಲ್ಲಿ ವಿವರಗಳನ್ನು ದಾಖಲಿಸಿ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ನಕಲು, ಬ್ಯಾಂಕ್ ಪಾಸ್ ಬುಕ್, 4 ಮತ್ತು 7ನೇ ತರಗತಿಯ ಅಂಕಪಟ್ಟಿಯ ಪ್ರತಿ (ಮುಖ್ಯೋಪಾದ್ಯಾಯರಿಂದ ದೃಢೀಕೃತ) ಮತ್ತು ಆದ್ಯತೆಯನ್ನು ಸಾಬೀತುಪಡಿಸುವ ದಾಖಲೆಗಳೊಂದಿಗೆ ಡಿಸೆಂಬರ್ 10 ರೊಳಗೆ ಅರ್ಜಿಗಳನ್ನು ಪರಪ್ಪ ಪರಿಶಿಷ್ಟ ವರ್ಗ ಅಭಿವೃದ್ಧಿ ಕಚೇರಿ ಅಥವಾ ಪನತ್ತಡಿ ಮತ್ತು ಭೀಮನಡಿ ಪರಿಶಿಷ್ಟ ವರ್ಗ ವಿಸ್ತರಣಾ ಕಚೇರಿಗಳಲ್ಲಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಲಭಿಸುವ ಅರ್ಜಿಗಳು, ಅಪೂರ್ಣ ಮತ್ತು ಅನುಸರಣೆ ಇಲ್ಲದ ಅರ್ಜಿಗಳನ್ನು ತಿರಸ್ಕರಿಸಲಾಗುವುದುತೀ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ(0467 2960111)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.