ಕಾಸರಗೋಡು: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು (ಡಿಸೆಂಬರ್ 15) ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ವಿದ್ಯಾನಗರ ಉದಯಗಿರಿಯಲ್ಲಿ ಗ್ರಂಥಾಲಯ ಪರಿಷತ್ ತರಬೇತಿ ಕಟ್ಟಡ ಉದ್ಘಾಟನೆ ನಡೆಸುವರು.
ಮಧ್ಯಾಹ್ನ 2 ಗಂಟೆಗೆ ಗೇಟ್ ವೇ ಬೇಕಲ್ ರೆಸಾರ್ಟ್ ಉದ್ಘಾಟನೆ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಕಟ್ಟಾಡಿ ಹಾಗೂ 4.30ಕ್ಕೆ ಚಿಮೇನಿಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು ಜರುಗಲಿವೆ.
ಲೈಬ್ರರಿ ಕೌನ್ಸಿಲ್ ತರಬೇತಿ ಸಂಸ್ಥೆಯ ಕಟ್ಟಡವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಉದ್ಘಾಟಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಆರ್ ಬಿಂದು ಅಧ್ಯಕ್ಷತೆ ವಹಿಸುವರು. ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕ ಎನ್.ಎ.ನೆಲ್ಲಿಕುನ್ನು, ಗ್ರಂಥಾಲಯ ಆಂದೋಲನ ಮತ್ತು ಸಾಮಾಜಿಕ-ಸಾಂಸ್ಕøತಿಕ ಕ್ಷೇತ್ರದ ಪ್ರಮುಖರು ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬೇಕಲ ಪ್ರವಾಸೋದ್ಯಮ ಯೋಜನೆಯ ಭಾಗವಾಗಿ ನಿರ್ಮಿಸಲಾದ ಗೇಟ್‍ವೇ ಬೇಕಲ್ ಫೈವ್ ಸ್ಟಾರ್ ರೆಸ್ಟೋರೆಂಟ್ ಅನ್ನು ಉದ್ಘಾಟಿಸಲಿದ್ದಾರೆ. ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಪಿ.ಎ.ಮುಹಮ್ಮದ್ ರಿಯಾಝ್ ಅಧ್ಯಕ್ಷತೆ ವಹಿಸುವರು. ಸಂಸದ ರಾಜಮೋಹನ್ ಉಣ್ಣಿತ್ತಾನ್ ಮತ್ತು ಶಾಸಕರಾದ ಎಂ. ರಾಜಗೋಪಾಲನ್, ಇ. ಚಂದ್ರಶೇಖರನ್, ಎನ್.ಎ.ನೆಲ್ಲಿಕುನ್ನು ಮತ್ತು ಎ.ಕೆ.ಎಂ.ಅಶ್ರಫ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಪುಲಿಕಲ್ ಸೇತುವೆಯನ್ನು ಇಂದು (ಡಿಸೆಂಬರ್ 15) ಸಚಿವ ಪಿಎ ಮುಹಮ್ಮದ್ ರಿಯಾಝ್ ಅವರು ಉದ್ಘಾಟಿಸುವರು.
ಕಿಫ್ಬಿ ಯೋಜನೆಯಡಿ ಮಡಿಕೈ ಗ್ರಾಮ ಪಂಚಾಯಿತಿಯಲ್ಲಿ ಪರಿತಿಪಲ್ಲಿ ನದಿಗೆ ಅಡ್ಡಲಾಗಿ ನೂತನವಾಗಿ ಪೂರ್ಣಗೊಂಡಿರುವ ಪುಲಿಕಲ್ ಸೇತುವೆಯನ್ನು ಇಂದು ಬೆಳಗ್ಗೆ 9.30ಕ್ಕೆ ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಪಿ.ಎ.ಮುಹಮ್ಮದ್ ರಿಯಾಝ್ ಉದ್ಘಾಟಿಸಲಿದ್ದಾರೆ. ಶಾಸಕ ಇ ಚಂದ್ರಶೇಖರನ್ ಅಧ್ಯಕ್ಷತೆ ವಹಿಸುವರು. ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ಕೆ.ಇನ್ಭಾಶೇಖರ್ ಮೊದಲಾದವರು ಭಾಗವಹಿಸಲಿದ್ದಾರೆ.