ಕಾಸರಗೋಡು: ಬಿಜೆಪಿಯ ಹಿರಿಯ ಮುಖಂಡ, ಸಂಘಟಕ ಕೂಡ್ಲು ಕುತ್ಯಾಳ ನಿವಾಸಿ ಎಸ್.ಕುಮಾರ್(60)ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ನಿಧನರಾದರು. ಯುವಮೋರ್ಚಾ ಸಂಘಟನೆ ಮೂಲಕ ಸಾಮಾಜಿಕ ಸೇವೆ ಆರಂಭಿಸಿದ ಇವರು ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಕಾಸರಗೋಡು ಮಂಡಲ ಸಮಿತಿ ಅಧ್ಯಕ್ಷ, ಜಿಲ್ಲಾ ಸಮಿತಿ ಕಾರ್ಯದರ್ಶಿ, ರಾಜ್ಯ ಸಮಿತಿ ಸದಸ್ಯನಾಗಿಯೂ ಸೇವೆ ಸಲ್ಲಿಸಿದ್ದರು. 2010ರಿಂದ 15ನೇ ಕಾಲಾವಧಿಯಲ್ಲಿ ಕಾಸರಗೋಡು ಬ್ಲಾಕ್ ಪಂಚಾಯಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ತಮ್ಮ ವಿಕಲಚೇತನವನ್ನೂ ಲೆಕ್ಕಿಸದೆ ಸಾಮಾಜಿಕ ಸೇವೆಯಲ್ಲಿ ಸಕ್ರಿಯರಾಗಿದ್ದರು. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.