ಮಹಾಕುಂಭ ನಗರ (PTI): ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಮಹಾಕುಂಭ ಮೇಳ-2025ರ ಸಂದರ್ಭದಲ್ಲಿ ಜನದಟ್ಟಣೆ ನಿರ್ವಹಣೆ ಮತ್ತು ತುರ್ತು ಸಂದರ್ಭದಲ್ಲಿ ತ್ವರಿತ ಸ್ಪಂದನೆ ಸೇರಿದಂತೆ ಪೊಲೀಸರು ಎದುರಿಸುವ ಸವಾಲುಗಳ ಸಮರ್ಪಕ ನಿರ್ವಹಣೆಗಾಗಿ ಮೊಬೈಲ್ ಆಯಪ್ ಅನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
'ಮಹಾಕುಂಭ ಮೇಳ-2025 ಪೊಲೀಸ್' ಆಯಪ್ ಮೂಲಕ ಪೊಲೀಸರು ಇನ್ನಷ್ಟು ದಕ್ಷತೆ, ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬಹುದು ಎಂದು ಅವರು ಹೇಳಿದ್ದಾರೆ.
ಜನವರಿ 13ರಿಂದ ಆರಂಭವಾಗುವ ಮಹಾಕುಂಭ ಮೇಳವು ಫೆಬ್ರುವರಿ 26ರವರೆಗೆ ನಡೆಯಲಿದ್ದು, ನಿತ್ಯ ಲಕ್ಷಾಂತರ ಜನರು ಪ್ರಯಾಗ್‌ರಾಜ್‌ಗೆ ಭೇಟಿ ನೀಡಲಿದ್ದಾರೆ.