ತಿರುವನಂತಪುರ: ಸಾರ್ವಜನಿಕ ಶಿಕ್ಷಣ ಇಲಾಖೆಯು ಎಲ್ಲಾ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಲ್ಯಾಪ್‍ಟಾಪ್ ವಿತರಿಸಲಿದೆ ಎಂಬ ಪ್ರಚಾರ ಸುಳ್ಳು ಎಂದು ಶಿಕ್ಷಣ ಸಚಿವ ವಿ.ಶಿವನ್‍ಕುಟ್ಟಿ ಹೇಳಿದ್ದಾರೆ.
ಸೈಬರ್ ವಂಚನೆಗೆ ಬಲಿಯಾಗದಂತೆ ಶಿಕ್ಷಣ ಸಚಿವರು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ವಂಚನೆಗೆ ಒಳಗಾಗಬಾರದು. ಈ ಬಗ್ಗೆ ಶೀಘ್ರ ಕ್ರಮಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯ ಪೋಲೀಸ್ ವರಿಷ್ಠರಿಗೆ ದೂರು ಸಲ್ಲಿಸಿದ್ದು, ನೋಂದಣಿ ಲಿಂಕ್ ಸಹಿತ ವಾಟ್ಸಾಪ್ ಸಂದೇಶದ ಮೂಲಕ ಜನಸಾಮಾನ್ಯರನ್ನು ತಲುಪುತ್ತಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಹೆಸರಿನಲ್ಲಿ ಅರ್ಜಿ ಸಲ್ಲಿಸಿದವರ ಹೆಸರಿನ ಮಾಹಿತಿ ಸಂಗ್ರಹಿಸಿ ಸೈಬರ್ ವಂಚನೆಗೆ ಯತ್ನಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಸಚಿವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರ್ಕಾರದ ಅಧಿಕೃತ ಚಿಹ್ನೆಗಳನ್ನು ಬಳಸಿ ಸಂದೇಶ ರವಾನಿಸುತ್ತಿರುವುದು ಘಟನೆಯ ಗಂಭೀರತೆಯನ್ನು ಹೆಚ್ಚಿಸಿದೆ. ವಾಟ್ಸ್ಆ್ಯಪ್ ಅಲ್ಲದೆ, ಫೇಸ್‍ಬುಕ್‍ನಲ್ಲೂ ಈ ಸಂದೇಶ ಹರಿದಾಡುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಮೋಸ ಹೋಗದಂತೆ ಎಚ್ಚರಿಕೆ ವಹಿಸುವಂತೆ ಸಚಿವರು ಎಚ್ಚರಿಕೆ ನೀಡಿದ್ದಾರೆ.