ಆಲಪ್ಪುಳ: ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಆಲಪ್ಪುಳದಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರಾದವರು ವಂದನಂ ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು.
ಗಾಯಗೊಂಡ ಓರ್ವ ವಿದ್ಯಾರ್ಥಿಯನ್ನು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರನ್ನು ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ಟವೇರಾ ಕಾರಿನಲ್ಲಿ 10 ಮಂದಿ ವಿದ್ಯಾರ್ಥಿಗಳು ಲಕ್ಷದ್ವೀಪ, ಚೆರ್ತಲ ಮತ್ತು ಕಣ್ಣೂರು ನಿವಾಸಿಗಳು ಎಂದು ತಿಳಿದು ಬಂದಿದೆ. ವಿದ್ಯಾರ್ಥಿಗಳು ಚಿತ್ರಮಂದಿರಕ್ಕೆ ಹೋಗುತ್ತಿದ್ದರು ಎಂದು ವರದಿಯಾಗಿದೆ.
ಕೆಎಸ್‍ಆರ್‍ಟಿಸಿ ಸೂಪರ್‍ಫಾಸ್ಟ್‍ಗೆ ಕಾರು ಡಿಕ್ಕಿ ಹೊಡೆದಿದೆ. ಕಾರು ಅಲಪ್ಪುಳ ಚಂಗನಾಶ್ಸೆರಿ ಕಡೆಯಿಂದ ಆಲಪ್ಪುಳ ರಾಷ್ಟ್ರೀಯ ಹೆದ್ದಾರಿ ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸೋಮವಾರ ರಾತ್ರಿ 9.30ರ ಸುಮಾರಿಗೆ ಕಾಯಂಕುಳಂಗೆ ತೆರಳುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗೆ ಕಾರು ಡಿಕ್ಕಿ ಹೊಡೆದಿದೆ.
ಮಳೆಯಿಂದಾಗಿ ಕಾರು ಸ್ಕಿಡ್ ಆಗಿ ನಿಯಂತ್ರಣ ತಪ್ಪಿ ಬಸ್ ಗೆ ಗುದ್ದಿದೆ ಎಂದು ಅಂದಾಜಿಸÀಲಾಗಿದೆ. ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಕೆಎಸ್‍ಆರ್‍ಟಿಸಿ ಬಸ್‍ನ ಮುಂಭಾಗಕ್ಕೆ ಹಾನಿಯಾಗಿದೆ. ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.