ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ಗಣಿ ಸ್ಫೋಟದಲ್ಲಿ ಗಸ್ತು ತಿರುಗುತ್ತಿದ್ದ ಯೋಧರೊಬ್ಬರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಯೋಧ ಎಲ್‌ಒಸಿಯ ಥಾನೆದರ್ ಟೆಕ್ರಿಯಲ್ಲಿ ಗಸ್ತು ತಿರುಗುತ್ತಿದ್ದಾಗ ಆಕಸ್ಮಿಕವಾಗಿ ಗಣಿಗಾರಿಕೆ ಪ್ರದೇಶಕ್ಕೆ ತೆರಳಿದ್ದಾನೆ. ಈ ಸಂದರ್ಭ ಸ್ಫೋಟ ಸಂಭವಿಸಿದೆ.
ಸ್ಫೋಟದಲ್ಲಿ 25ನೇ ರಾಷ್ಟ್ರೀಯ ರೈಫಲ್ಸ್‌ನ ಯೋಧ ಹವಾಲ್ದಾರ್ ವಿ ಸುಬ್ಬಯ್ಯ ವಾರಿಕುಂಟಾ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೈಟ್ ನೈಟ್ ಕಾರ್ಪ್ಸ್‌ನ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಲೆಫ್ಟಿನೆಂಟ್ ಜನರಲ್ ನವೀನ್ ಸಚ್‌ದೇವ ಮತ್ತು ಎಲ್ಲ ಶ್ರೇಣಿಗಳ ಯೋಧರು ಮೃತ ಯೋಧನಿಗೆ ಗೌರವ ಸಲ್ಲಿಸಿದರು.
ಯೋಧನ ಕುಟುಂಬಕ್ಕೆ ನಮ್ಮ ಸಂತಾಪಗಳು. ಈ ದುಃಖದ ಸಮಯದಲ್ಲಿ ನಾವು ಅವರೊಂದಿಗೆ ದೃಢವಾಗಿ ನಿಲ್ಲುತ್ತೇವೆ" ಎಂದು ಜಿಒಸಿ ಹೇಳಿದ್ದಾರೆ.