ಕೋಲ್ಕತ್ತ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತರಿಗೆ ಕೇಂದ್ರ ಸರ್ಕಾರ ರಕ್ಷಣೆ ಒದಗಿಸಬೇಕು ಹಾಗೂ ಭಾರತಕ್ಕೆ ಬರಲು ಸಿದ್ಧವಿರುವವರನ್ನು ಕರೆತರಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದಲ್ಲಿ ಈಗಾಗಲೇ ಕೋಮು ಉದ್ವಿಗ್ನತೆ ಸೃಷ್ಟಿಯಾಗಿದ್ದು, ಇದರ ನಡುವೆಯೇ ಸಮಾಜದಲ್ಲಿ ಮತ್ತಷ್ಟು ಶಾಂತಿ ಕದಡುವ ಪ್ರಯತ್ನದ ಭಾಗವಾಗಿ ನಕಲಿ ವಿಡಿಯೊಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.
ದೇಶದ ಪರಮಾಣು ಶಕ್ತಿ 2031ರ ವೇಳೆಗೆ ಮೂರು ಪಟ್ಟು ಹೆಚ್ಚಳ: ಸಚಿವ ಜಿತೇಂದ್ರ ಸಿಂಗ್ನ್ಯಾ. ಶೇಖರ್ ಯಾದವ್ ದ್ವೇಷ ಭಾಷಣ: ದೋಷಾರೋಪಣೆ ಪ್ರಕ್ರಿಯೆ ಆರಂಭಿಸಿದ 'ಇಂಡಿಯಾ' ಬಣ
'ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಬೇಕೆಂದು ಬಯಸುತ್ತೇವೆ. ಈ ಸಂಬಂಧ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತರಾಗಬೇಕೆಂದು' ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ಆಗಸ್ಟ್ ತಿಂಗಳಲ್ಲಿ ಬಾಂಗ್ಲಾದೇಶದಲ್ಲಿ ಹಸೀನಾ ಸರ್ಕಾರ ಪತನಗೊಂಡ ಬಳಿಕ ಮೊಹಮ್ಮದ್ ಯೂನುಸ್ ಅವರು ಮಧ್ಯಂತರ ಸರ್ಕಾರದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಇದಾದ ಬಳಿಕ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹದಗೆಟ್ಟಿತ್ತು. ಕೆಲವು ವಾರದ ಹಿಂದೆ ಹಿಂದೂಗಳ ಮೇಲೆ ದಾಳಿ ಹಾಗೂ ಹಿಂದೂ ಮುಖಂಡ ಚಿನ್ಮಯಿ ಕೃಷ್ಣದಾಸ್ ಬಂಧನದ ಬಳಿಕ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿತ್ತು.