ಚೆನ್ನೈ: ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಖಂಡಿಸಿ ಡಿಎಂಕೆ ಪಕ್ಷ ತಮಿಳುನಾಡಿನಾದ್ಯಂತ ಗುರುವಾರ ಪ್ರತಿಭಟನೆ ನಡೆಸಿತು.
ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಭಾರತಿ ಪತ್ರಕರ್ತರೊಂದಿಗೆ ಮಾತನಾಡಿ ಪ್ರಧಾನಿ ಮೋದಿ ಅವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇದ್ದರೆ, ಶಾ ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಬೇಕು ಎಂದು ಅವರು ಒತ್ತಾಯಿಸಿದರು.
ಹಾಗೆಯೇ ಅಮಿತ್ ಶಾ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು.
ಡಿಎಂಕೆ ರಾಜ್ಯದಾದ್ಯಂತ ಅಂಬೇಡ್ಕರ್ ಅವರ ಚಿತ್ರಗಳನ್ನು ಹಿಡಿದು ಪ್ರತಿಭಟನೆಗಳನ್ನು ನಡೆಸಿತು. ಅಮಿತ್ ಶಾ ಕ್ಷಮೆಯಾಚಿಸಬೇಕು ಮತ್ತು ಸಚಿವ ಸಂಪುಟದಿಂದ ಅವರನ್ನು ತೆಗೆದುಹಾಕಬೇಕು ಎಂದು ಆಗ್ರಹಿಸಿತು.
ಇದೇ ಡಿಎಂಕೆಯ ಮೈತ್ರಿ ಪಕ್ಷಗಳು ಕೂಡ ಪ್ರತಿಭಟನೆ ನಡೆಸಿದವು.