ಕಾಸರಗೋಡು: ಅಂತಾರಾಷ್ಟ್ರೀಯ ವಿಕಲಚೇತನರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಉದ್ಘಾಟನೆ, ಶ್ರವಣ ಸಾಧನಗಳ ವಿತರಣೆ ಹಾಗೂ ಜಾಗೃತಿ ವಿಚಾರ ಸಂಕಿರಣ ಕಾಞಂಗಾಡಿನಲ್ಲಿ ಆಯೋಜಿಸಲಾಯಿತು. ಕಾಞಂಗಾಡ್ ಜಿಲ್ಲಾ ಆಸ್ಪತ್ರೆಯ ಆದ್ರ್ರಂ ಕಟ್ಟಡ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ ಬೇಬಿ ಬಾಲಕೃಷ್ಣನ್ ಉದ್ಘಾಟಿಸಿದರು. ಕಾಞಂಗಾಡು ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಡಾ. ಎಂ.ಪಿ ಜೀಜಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಡಾ.ಎ.ವಿ.ರಾಮದಾಸ್ ಪ್ರಧಾನ ಭಾಷಣ ಮಾಡಿದರು.
ರಾಷ್ಟ್ರೀಯ ಆರೋಗ್ಯ ಮಿಷನ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಡಾ.ಸಚಿನ್ ಸೆಲ್ವೆ ಮತ್ತು ಕಾಞಂಗಾಡ್ ಜಿಲ್ಲಾ ಆಸ್ಪತ್ರೆಯ ನಸಿರ್ಂಗ್ ಅಧೀಕ್ಷಕಿ ಸಿ.ಲಲಿತಾಂಬಿಕಾ ಉಪಸ್ಥಿತರಿದ್ದರು. ಜಿಲ್ಲಾ ಮಾಸ್ ಮೀಡಿಯಾ ಅಧಿಕಾರಿ ಅಬ್ದುಲ್ ಲತೀಫ್ ಮಠತ್ತಿಲ್ ಸ್ವಾಗತಿಸಿದರು. ಜಿಲ್ಲಾ ಆಸ್ಪತ್ರೆ ಜೆಎಚ್ ಐ ಪಿ ಮುರಳೀಧರನ್ ವಂದಿಸಿದರು. ಬಳಿಕ ನಡೆದ ಜಾಗೃತಿ ವಿಚಾರ ಸಂಕಿರಣದಲ್ಲಿ ಜಿಲ್ಲಾ ಆಸ್ಪತ್ರೆಯ ಪಿಎಂಆರ್ ಸಲಹೆಗಾರ ಡಾ. ಇ.ಕೆ.ಆಶಾ ವಿಷಯ ಮಂಡಿಸಿದರು.
ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ)ಕಚೇರಿ, ರಾಷ್ಟ್ರೀಯ ಆರೋಗ್ಯ ಮಿಷನ್ ಮತ್ತು ಕಾಞಂಗಾಡ್ ಜಿಲ್ಲಾ ಆಸ್ಪತ್ರೆಯ ಫಿಸಿಕಲ್ ಮೆಡಿಸಿನ್ ಮತ್ತು ಪುನರ್ವಸತಿ ಇಲಾಖೆ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶ್ರವಣದೋಷವುಳ್ಳವರಿಗೆ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಮಂಜೂರು ಮಾಡಿದ ಹಣವನ್ನು ಬಳಸಿಕೊಂಡು ಶ್ರವಣ ಸಾಧನಗಳನ್ನು ವಿತರಿಸಲಾಯಿತು. ಈ ವರ್ಷ 10 ಮಕ್ಕಳಿಗೆ ಶ್ರವಣ ಸಾಧನ ವಿತರಿಸಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ತಿಳಿಸಿದರು. ರಾಮದಾಸ್ ಎ.ವಿ ಮಾಹಿತಿ ನೀಡಿದರು.