ಕಾಸರಗೋಡು: ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಂದ ಮನಸ್ಸಿನ ಶುದ್ಧೀಕರಣ ನಡೆಯುವುದಾಗಿ ನೋಂದಣಿ, ಪ್ರಾಚ್ಯವಸ್ತು ಖಾತೆ ಸಚಿವ ರಾಮಚಂದ್ರ ಕಡನ್ನಪಳ್ಳಿ ತಿಳಿಸಿದ್ದಾರೆ. ಅವರು ಉದಿನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಸಮಾರೋಪ ಸಮಾರಂಭ ಉದ್ಘಾಟಿಸಿದ ಮಾತನಾಡಿರು ಶಿಕ್ಷಣ ಕ್ಷೇತ್ರದಲ್ಲಿ ಕೇರಳ ದೇಶದಲ್ಲೇ ಮುಂಚೂಣಿಯಲ್ಲಿರುವುದಲ್ಲದೆ, ಹೆಚ್ಚು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಹಾಜರುಪಡಿಸಿ ಎಸ್ಸೆಸೆಲ್ಸಿ ಪರೀಕ್ಷೆಯು ಕೇರಳದಲ್ಲಿ ನಡೆಯುತ್ತಿದೆ. ಶೈಕ್ಷಣಿಕ ಪ್ರಗತಿಯೊಂದಿಗೆ ಏಷ್ಯಾಖಂಡದಲ್ಲೇ ಖ್ಯಾತಿಗಳಿಸಿರುವ ಕೇರಳದ ಶಾಲಾ ಕಲೋತ್ಸವ ಕನಮನ್ನಣೆಗೆ ಕಾರಣವಾಗಿರುವುದಾಗಿ ತಿಳಿಸಿದರು.
ಈ ಸಂದರ್ಭ ಶಾಲಾ ಕಲೋತ್ಸವದ ಯಶಸ್ಸಿಗೆ ವಿವಿಧ ಕ್ಷೇತ್ರಗಳಲ್ಲಿ ಶೇಸಹಕರಿಸಿದವರನ್ನು ಸನ್ಮಾನಿಸಲಾಯಿತು. ಶಾಸಕ ಎಂ.ರಾಜಗೋಪಾಲನ್ ಅಧ್ಯಕ್ಷತೆ ವಹಿಸಿದ್ದು, ಸಂಸದ ರಾಜಮೋಹನ್ ಉನ್ನಿಥಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಸಕ ಎ.ಕೆ.ಎಂ.ಅಶ್ರಫ್ ವಿಶೇಷ ಆಹ್ವಾನಿತರಾಗಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ ಬೇಬಿ ಬಾಲಕೃಷ್ಣನ್,
ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್, ನೀಲೇಶ್ವರ ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಮಾಧವನ್ ಮಣಿಯರ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಸಂಚಾಲಕ ಎಂ.ಟಿ.ಪಿ. ಇಸ್ಮಾಯಿಲ್ ಸ್ವಾಗತಿಸಿದರು. ಕಾರ್ಯಕ್ರಮ ಸಮಿತಿ ಸಂಚಾಲಕ ಕೆ.ವಿ.ಸತ್ಯನ್ ಮಾಡಕ್ಕಲ್ ವಂದಿಸಿದರು.