ಲಖನೌ: 'ಮುಸ್ಲಿಮರ ಮತ ಪಡೆಯುದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಭಲ್‌ಗೆ ಭೇಟಿ ನೀಡುವ ನಾಟಕವಾಡುತ್ತಿದ್ದಾರೆ' ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಆರೋಪಿಸಿದ್ದಾರೆ.
'ಇಲ್ಲಿನ ವಾತಾವರಣವನ್ನು ಹಾಳು ಮಾಡಲು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಯತ್ನಿಸುತ್ತಿವೆ.
ಇವುಗಳ ಅವನತಿ ಖಚಿತ. ಕಾಂಗ್ರೆಸ್ ಮುಕ್ತ ಭಾರತವಾಗಲಿದ್ದು, ಸಮಾಜವಾದಿ ಪಕ್ಷ ಸಮಾಪ್ತಿ ಆಗಲಿದೆ' ಎಂದು ಕಿಡಿಕಾರಿದರು.
'ಸಮಾಜವಾದಿ ಪಕ್ಷದ ಶಾಸಕ ಮತ್ತು ಸಂಸದನ ನಡುವಿನ ಪೈಪೋಟಿಯಿಂದ ಸಂಭಲ್‌ನಲ್ಲಿ ಹಿಂಸಾಚಾರ ನಡೆದಿದೆ' ಎಂದು ಆರೋಪಿಸಿದರು.
ಮತ್ತೊರ್ವ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಮಾತನಾಡಿ, 'ಸಂಭಲ್ ಹಿಂಸಾಚಾರದ ಬಗ್ಗೆ ಸ್ವತಂತ್ರ ತನಿಖೆ ನಡೆಯುತ್ತಿದ್ದು, ಈ ಪ್ರದೇಶದಲ್ಲಿ ಶಾಂತಿ ಕಾಪಾಡಲು ಪ್ರತಿಪಕ್ಷಗಳು ಸರ್ಕಾರವನ್ನು ಬೆಂಬಲಿಸಬೇಕು' ಎಂದರು.
ಸಂಭಲ್‌ನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಇಂದು(ಬುಧವಾರ) ಅಲ್ಲಿಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ.